ಲೋಕಸಭೆ ಚುನಾವಣೆ 2024ಕ್ಕೆ ಮುನ್ನವೇ ಹುಬ್ಬಳ್ಳಿ ಬಿಜೆಪಿಯಲ್ಲಿ ಅಸಮಾಧಾನ ಬೆಂಕಿ ಹೊಗೆಯಾಡಲು ಆರಂಭಿಸಿದೆ.

Waves of Karnataka


ಲೋಕಸಭೆ ಚುನಾವಣೆ 2024ಕ್ಕೆ ಮುನ್ನವೇ ಹುಬ್ಬಳ್ಳಿ ಬಿಜೆಪಿಯಲ್ಲಿ ಅಸಮಾಧಾನ ಬೆಂಕಿ ಹೊಗೆಯಾಡಲು ಆರಂಭಿಸಿದೆ. ಪ್ರದೀಪ್ ಶೆಟ್ಟರ್, ಶಂಕರ ಪಾಟೀಲ ಮುನೇನಕೊಪ್ಪ ಮುಂತಾದವರು ಕಿಡಿ ಕಾರಲು ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಕಿ ಆರಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಲೋಕಸಭಾ ಚುನಾವಣೆ ಮಾಡುತ್ತೇವೆ. ಯಾರು ಇವತ್ತು ಪಕ್ಷದಲ್ಲಿನ ಅಸಮಾಧಾನವನ್ನು ಹೊರ ಹಾಕಿದ್ದಾರೆ, ಅವರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
 
ಕೋರ್ ಕಮೀಟಿ ಸಭೆಯ ಬಳಿಕ ಮಾಧ್ಯಮಕ್ಕೆ ಮಾತನಾಡಿದ ಅವರು, ಕೆಲವರು ಭಾವನೆಗಳನ್ನು ವ್ಯಕ್ತ ಮಾಡಿದ್ದಾರೆ, ಲಿಂಗಾಯತರಿಗೆ ಅನ್ಯಾಯ ಆಗುತ್ತಿದೆ ಎಂದು ಹೇಳಿದ್ದಾರೆ. ಅವು ಬಗೆಹರೆಯಲಾಗದ ಸಮಸ್ಯೆಗಳೆನೆಲ್ಲ, ವಿಶ್ವಾಸಕ್ಕೆ ತೆಗೆದುಕೊಂಡು ಹೋದ್ರೆ ಎಲ್ಲವೂ ‌ಸರಿ ಹೋಗುತ್ತದೆ ಎಂದರು.
 
ಜಗದೀಶ್ ಶೆಟ್ಟರ್ ಜೊತೆ ಗುರುತಿಸಿಕೊಂಡಿದ್ದ ಪ್ರದೀಪ್ ಶೆಟ್ಟರ್ ಮತ್ತು ಶಂಕರ ಪಾಟೀಲ ಮುನೇನಕೊಪ್ಪರಿಂದ ಹಿಡಿದು ಎಲ್ಲರ ಜೊತೆಗೆ ಮಾತನಾಡಲಾಗಿದೆ.‌ ಲೋಕಸಭಾ ಚುನಾವಣೆ ಸಮೀಪಸುತ್ತಿದೆ, ಹೀಗಾಗಿ ಬೂತ್ ಮಟ್ಟದದಿಂದ ಪಕ್ಷ ಸಂಘಟನೆ ಮಾಡಬೇಕಿದೆ. ಬಿಎಲ್‌ಎ 1, ಬಿಎಲ್‌ಎ 2 ಮಟ್ಟದಲ್ಲಿ ಪಕ್ಷ ಪುನರ್ ಸಂಘಟನೆ ಆಗಬೇಕಿದೆ ಎಂದು ಅವರು ಹೇಳಿದರು.