ಇಡೀ ಜಗತ್ತು ಭಾರತವನ್ನು ಹೊಗಳುತ್ತಿದೆ. ಕಾಂಗ್ರೆಸ್ ಮಾತ್ರ ತೆಗಳುತ್ತಿದೆ. ಇದು ಮಾನಸಿಕ ರೋಗ ಎಂದು ಪ್ರಲ್ಹಾದ್‌ ಜೋಶಿ ಟೀಕಿಸಿದರು.

Waves of Karnataka


ಖಾಸಗಿ ಬಸ್ ಮಾಲೀಕರ ತೊಂದರೆ ನಿವಾರಿಸುವ ಕೆಲಸ ರಾಜ್ಯ ಸರ್ಕಾರದಿಂದ ಆಗಬೇಕು ಎಂದು  ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿ, ರಾಜ್ಯ  ಸರಕಾರದ ಶಕ್ತಿ ಯೋಜನೆ ವಿರೋಧಿಸಿ ಖಾಸಗಿ ವಾಹನ ಬಂದ್ ಮಾಡಲಾಗಿದೆ.  ಖಾಸಗಿ ಅವರಿಗೆ ತೊಂದರೆ ಆಗಿರೋದು ನಿಜ. ಅಲ್ಲೂ ಬಡಜನ ಇರೋದ್ರಿಂದ ಸರ್ಕಾರ ಗಮನ ಕೊಡಬೇಕು. ಕರ್ನಾಟಕ ರಾಜ್ಯ ಸಾರಿಗಿಗೆ ಕೂಡ ಸರ್ಕಾರ ದುಡ್ಡು ಕೊಡುತ್ತಿಲ್ಲ. ಅದು ಕೂಡ ಲಾಸ್ ನಲ್ಲಿ ಹೋಗ್ತಾ ಇದೆ. ಅದರ ಬಗ್ಗೆಯೂ ಸರ್ಕಾರ ಗಮನ ಕೊಡಬೇಕು. ಉಚಿತ ಕೊಡ್ತಾ ಇದ್ದಾರೆ ಅಂತ ಮನಬಂದಂತೆ ನಡೆದುಕೊಳುತ್ತಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಜಾತ್ಯಾತೀತ ಜನತಾದಳ ಹಾಗೂ ಭಾರತೀಯ ಜನತಾ ಪಕ್ಷದ ಮೈತ್ರಿ ಇನ್ನೂ ಫೈನಲ್ ಆಗಿಲ್ಲ. ಅದರ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಮೈತ್ರಿ ಅನಿವಾರ್ಯ ಅಂತ ಬಸವರಾಜ ಬೊಮ್ಮಯಿ ಅವರು ಸ್ಥಳೀಯವಾಗಿ ಹೇಳಿರಬಹುದು. ಆದರೆ, ನಾನು ಕೇಂದ್ರದಲ್ಲಿ ಮಂತ್ರಿಯಾಗಿ ನಮ್ಮ ಪಕ್ಷದ ವರಿಷ್ಠರು ಹೇಳುವವರೆಗೆ ನಾನು ಕಾಮೆಂಟ್ ಮಾಡೋದ್ದಿಲ್ಲ ಎಂದರು.