ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳ ನಾಮ ಫಲಕದಲ್ಲಿ ಶೇ. 60 ಕನ್ನಡ ಭಾಷೆಯಲ್ಲಿ ಇರಬೇಕೆಂದು ಗಡುವು ನೀಡಲಾಗುವುದು.

Waves of Karnataka


 ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳ ನಾಮ ಫಲಕದಲ್ಲಿ ಶೇ. 60 ಕನ್ನಡ ಭಾಷೆಯಲ್ಲಿ ಇರಬೇಕೆಂದು ಗಡುವು ನೀಡಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವ ಕುರಿತು ನಡೆದ ಉನ್ನತ ಮಟ್ಟದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ ಎಂದರು.