ಉಚಿತ ವಿದ್ಯುತ್ ಯೋಜನೆ ಗೃಹಜ್ಯೋತಿ ನಿಯಮದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದ್ದು, ವರ್ಷಕ್ಕೆ ಸರಾಸರಿ ಬಳಕೆಯ ಮೇಲೆ ಹೆಚ್ಚುವರಿ ಶೇ.10 ರಷ್ಟು ಉಚಿತ ವಿದ್ಯುತ್ ನೀಡುವ ಮಾನದಂಡವನ್ನು 10 ಯೂನಿಟ್ ಗೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್ ಅವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ಅಂತಾ ಹೇಳಿದ್ವಿ. ಇದರನ್ವಯ ವಾರ್ಷಿಕ ಸರಾಸರಿ ಮೇಲೆ ಶೇ. 10 ರಷ್ಟು ವಿದ್ಯುತ್ ಹೆಚ್ಚು ಬಳಕೆ ಮಾಡಲು ಗ್ರಾಹಕರಿಗೆ ಅವಕಾಶ ನೀಡಲಾಗಿತ್ತು. ಕೇವಲ 20, 30, 40 ಯೂನಿಟ್ ಬಳಕೆ ಮಾಡುವ ಗ್ರಾಹಕರಿಗೆ ಶೇ 10 ರಷ್ಟು ಹೆಚ್ಚುವರಿ ಯೂನಿಟ್ ಅಂದರೆ ಕಡಿಮೆ ವಿದ್ಯುತ್ ಸಿಗುತ್ತಿದೆ. ಹೀಗಾಗಿ 48 ಯೂನಿಟ್ ಒಳಗೆ ಉಪಯೋಗ ಮಾಡುವ ಗ್ರಾಹಕರಿಗೆ ಶೇ. 10 ರಷ್ಟು ವಿದ್ಯುತ್ ಬದಲಾಗಿ 10 ಯೂನಿಟ್ ಹೆಚ್ಚುವರಿ ನೀಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ
