1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ರಾಮ ಜನ್ಮ ಭೂಮಿ ಹೋರಾಟದ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಶ್ರೀಕಾಂತ್ ಪೂಜಾರಿ ವಿರುದ್ಧ ದಾಖಲಾಗಿರುವ, 16 ಪ್ರಕರಣಗಳು ಹಾಗೂ ಎಲ್ಲಾ ಪ್ರಕರಣಗಳ ವಿವರಣೆಯುಳ್ಳ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.
ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ ಎಂದಿದ್ದಾರೆ.
