ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಮತ್ತೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿಯಿಂದ ಮಾತ್ರ ಕಾವೇರಿ ನೀರಿನ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಶನಿವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ 90 ವರ್ಷದ ಜೆಡಿಎಸ್ ವರಿಷ್ಠರು, ತಮ್ಮ ಕೊನೆಯ ಉಸಿರು ಇರುವವರೆಗೂ ಕಾವೇರಿ ನೀರಿಗಾಗಿ ಹೋರಾಟ ಮಾಡುವುದಾಗಿ ಪ್ರತಿಜ್ಞೆ ಮಾಡಿದರು. ಕರ್ನಾಟಕ ಎದುರಿಸುತ್ತಿರುವ ಕಾವೇರಿ ನೀರಿನ ಸಮಸ್ಯೆ ಬಗೆಹರಿಸುವ ಶಕ್ತಿ ಮೋದಿಗೆ ಮಾತ್ರ ಇದೆ ಎಂದರು.
ಕಾವೇರಿ ನೀರು ಬಿಡುವಂತೆ ಪ್ರತಿ ವರ್ಷ ತಮಿಳುನಾಡು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸುತ್ತದೆ. ನಮಗೆ ನೀರಿಲ್ಲದಿದ್ದರೂ,ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀರು ಕೊಡಿ ಎಂದು ಹೇಳುತ್ತಾರೆ, ನಮ್ಮ ಅಧಿಕಾರಿಗಳು ಎಷ್ಟೇ ವಾದಿಸಿದರೂ ಪ್ರಯೋಜನವಾಗಿಲ್ಲ. ಕಾವೇರಿ ಜಲಾಶಯಗಳಲ್ಲಿ ಎಷ್ಟು ನೀರಿದೆ ಎಂಬುದನ್ನು ನೋಡಲು ಸಿಡಬ್ಲ್ಯುಎಂಎ ಕರ್ನಾಟಕಕ್ಕೆ ಭೇಟಿ ನೀಡಿಲ್ಲ. ಮತ್ತೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿ ಅವರಿಂದ ಮಾತ್ರ ಕಾವೇರಿ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ಹೇಳಿದರು
ಮತ್ತೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿಯಿಂದ ಮಾತ್ರ ಕಾವೇರಿ ನೀರಿನ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
January 13, 2024
Tags
