ಕನ್ನಡ ಸಂಸ್ಕೃತಿ ರಕ್ಷಣೆಯ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಹೇಳಿದರು.
January 02, 2024
ಕನ್ನಡ ಸಂಸ್ಕೃತಿ ರಕ್ಷಣೆಯ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಮಂಗಳವಾರ ಹೇಳಿದರು.
ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಕನ್ನಡ ಪರ ಕಾರ್ಯಕರ್ತರು ಹೋರಾಟ ನಡೆಸಿ, ಹಲವಾರು ಅಂಗಡಿಗಳನ್ನು ಧ್ವಂಸ ಮಾಡಿದ್ದರು, ಘಟನೆ ಸಂಬಂಧ ಹಲವಾರು ಕನ್ನಡ ಪರ ಹೋರಾಟಗಾರರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಚಿವರು, ಕನ್ನಡ, ನಾಡು, ನುಡಿ ಪರವಾದ ಯಾವುದೇ ಹೋರಾಟಗಳಿಗೆ ರಾಜ್ಯ ಸರ್ಕಾರ ಬೆಂಬಲವಾಗಿ ನಿಲ್ಲಲಿದೆ. ಆದರೆ, ಕನ್ನಡ ಸಂಸ್ಕೃತಿ ರಕ್ಷಣೆಯ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಹೇಳಿದರು.ಇದೇ ವೇಳೆ ಮುಸ್ಲಿಂ ಮಹಿಳೆಯರ ವಿರುದ್ಧ ವಾಗ್ದಾಳಿ ನಡೆಸಿದ ಆರ್‌ಎಸ್‌ಎಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸದಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುವುದು. ಕಾನೂನು ಕೈಗೆತ್ತಿಕೊಳ್ಳುವ ಯಾರನ್ನೂ ಸರ್ಕಾರ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
