ಆರ್.ಅಶೋಕ್: ರಾಹುಲ್ ಎಲ್ಲೆಲ್ಲಿ ಪ್ರವಾಸ ಮಾಡಿದ್ದಾರೋ ಅಲ್ಲಿ ಕಾಂಗ್ರೆಸ್ ಸೋತಿದೆ.
January 14, 2024
ರಾಹುಲ್ ಗಾಂಧಿ ಎಲ್ಲೆಲ್ಲಿ ಪ್ರವಾಸ ಮಾಡಿದ್ದಾರೋ ಅಲ್ಲಲ್ಲಿ ಕಾಂಗ್ರೆಸ್ ಸೋತಿದೆ. ಆದ್ದರಿಂದ ಭಾರತ್ ನ್ಯಾಯ ಯಾತ್ರೆಗೆ ಮೂರು ಕಾಸಿನ ಬೆಲೆ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಮತ್ತು ಸಂವಿಧಾನ ಉಳಿಸುತ್ತೇನೆ ಎಂದು ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ ನ್ಯಾಯ ಯಾತ್ರೆ ಚುನಾವಣಾ ಗಿಮಿಕ್ ಅಲ್ಲದೆ ಬೇರೇನೂ ಅಲ್ಲ. ನರೇಂದ್ರಮೋದಿ ಅವರು ಮತ್ತೊಮ್ಮೆ ಲೋಕಸಭೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುತ್ತಾರೆಂಬ ಭಯದಿಂದ ಯಾತ್ರೆ ಹೊರಟಿದ್ದಾರೆ ಎಂದು ವ್ಯಂಗ್ಯವಾಡಿದರು.
Tags
