ಸಾರ್ವಜನಿಕ ರಸ್ತೆಯಲ್ಲಿ ದೇವಾಲಯ, ಮಸೀದಿ, ಚರ್ಚ್ ನಿರ್ಮಿಸಿದರೆ ಜನರು ಏನು ಮಾಡಬೇಕು? ಎಂದು ಬಿಬಿಎಂಪಿಗೆ ಪ್ರಶ್ನಿಸಿದೆ.
January 11, 2024
ನಗರದ ಸುಂಕದಕಟ್ಟೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿ ದೇವಾಲಯ ನಿರ್ಮಿಸಿರುವುದಕ್ಕೆ ಹೈಕೋರ್ಟ್ ಬುಧವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸಾರ್ವಜನಿಕ ರಸ್ತೆಯಲ್ಲಿ ದೇವಾಲಯ, ಮಸೀದಿ, ಚರ್ಚ್ ನಿರ್ಮಿಸಿದರೆ ಜನರು ಏನು ಮಾಡಬೇಕು? ಎಂದು ಬಿಬಿಎಂಪಿಗೆ ಪ್ರಶ್ನಿಸಿದೆ.
ಸುಂಕದಕಟ್ಟೆಯ ಸಿ ಹೊನ್ನಯ್ಯ ಮತ್ತಿತರರು ರಸ್ತೆ ಒತ್ತುವರಿ ಮಾಡಿ ಸಲ್ಲಾಪುರದಮ್ಮ ದೇವಾಲಯ ಟ್ರಸ್ಟ್ ಸದಸ್ಯರು ದೇವಸ್ಥಾನ ನಿರ್ಮಿಸುತ್ತಿರುವುದಕ್ಕೆ ಆಕ್ಷೇಪಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲರು “ಸರ್ಕಾರಿ ರಸ್ತೆ ಒತ್ತುವರಿ ಮಾಡಿ ದೇವಸ್ಥಾನ ನಿರ್ಮಿಸುತ್ತಿರುವುದಲ್ಲದೇ ಓಡಾಟಕ್ಕೆ ರಸ್ತೆ ನಿರ್ಬಂಧಿಸಿದ್ದಾರೆ” ಎಂದು ಪೀಠದ ಗಮನಸೆಳೆದರು.
Tags
