ಲೋಕಸಭೆ ಚುನಾವಣೆ ಸಿದ್ಧತೆ ನಡುವಲ್ಲೇ ರಾಜ್ಯಕ್ಕೆ ಹೆಚ್ಚಿನ ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ ಸಂಪುಟ ಸಚಿವರು ಸೇರಿದಂತೆ ಹಲವು ನಾಯಕರು ಪಟ್ಟು ಹಿಡಿದಿದ್ದು ಇದರಿಂದಾಗಿ ಕಾಂಗ್ರೆಸ್‌ಗೆ ಹೊಸ ತಲೆನೋವು ಶುರುವಾಗಿದೆ.
ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮುಂದೆ ಸಿದ್ದರಾಮಯ್ಯ ಸಂಪುಟದ ಸಚಿವರು ಸೇರಿದಂತೆ ಹಲವು ಪಕ್ಷದ ಹಲವು ನಾಯಕರು ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆಗಾಗಿ ಬೇಡಿಕೆ ಇಟ್ಟಿದ್ದಾರೆ.
ಹೆಚ್ಚುವರಿ ಡಿಸಿಎಂ ಹುದ್ದೆಯ ಅಗತ್ಯ ಕುರಿತು ಹೈಕಮಾಂಡ್'ಗೆ ತಿಳಿಸುವಂತೆ ಸುರ್ಜೇವಾಲಾ ಅವರ ಬಳಿ ಆಗ್ರಹಿಸಿದ್ದಾರೆಂದು ತಿಳಿದುಬಂದಿದೆ.
