ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಂತ್ಯ ಕಾಣುವುದು ನಿಶ್ಚಿತ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಹೇಳಿದ್ದಾರೆ.
January 05, 2024
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಂತ್ಯ ಕಾಣುವುದು ನಿಶ್ಚಿತ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೇವೇಗೌಡರು, ಕಳೆದ 60 ವರ್ಷಗಳಿಂದ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ನನಗೇ ಇವರು ಹೇಳ್ತಾರೆ. ಇವತ್ತು ಹೇಳ್ತೀನಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ. ನಾವು ಸೋಲಿಸಿಯೇ ಸೋಲಿಸ್ತೀವಿ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ಅಂತ್ಯ ಕಾಣುತ್ತೆ ಎಂದರು.
