ಆದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ ‘ಕಾಂಗರೂ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಮಾತಿನ ಜೋಡಣೆ(ಡಬ್ಬಿಂಗ್) ಸಹ ಪೂರ್ಣವಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಕಾಂಗರೂ ಚಿತ್ರ ಕನ್ನಡ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ತಯಾರಿ ಆಗುತಿಧೆ.
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಮೋಷನ್ ಪೋಸ್ಟರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ಒಬ್ಬರು ನಮ್ಮ ಚಿತ್ರದ ಮೋಷನ್ ಪೋಸ್ಟರ್ ಅನಾವರಣ ಮಾಡಲಿದ್ದಾರೆ. ಕಾಂಗರೂ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಿರುವ ಸೂಪರ್ ಸ್ಟಾರ್ ಯಾರು ಎಂಬುದನ್ನು ಸದ್ಯದಲ್ಲೇ ತಿಳಿಸುವುದಾಗಿ ನಿರ್ದೇಶಕ ಕಿಶೋರ್ ಮೇಗಳಮನೆ ಹೇಳಿದ್ದಾರೆ.
