ಮಾನ್ಯ ಮಾಜಿ ಪ್ರಧಾನಿಗಳು ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ, ದೇಶವನ್ನು ಜಾತಿ,ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೇಪುಟದಲ್ಲಿ ಏದುಸಿರು ಬಿಡುತ್ತಿದೆ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಶಾಪ ಹಾಕುವುದನ್ನು ಗೌಡರೆಂದೂ ಮಾಡಿಲ್ಲ, ಮಾಡುವುದೂ ಇಲ್ಲ. ಅವರ ಹಸ್ತ ಅಭಯ ಹಸ್ತ. ಅದು ಆಶೀರ್ವಾದ, ಅನುಗ್ರಹದ ದ್ಯೋತಕ. ಗುರುಸ್ವಾಮಿ ಎಂಬ ಅನಾಮಧೇಯ ವ್ಯಕ್ತಿ ಎದುರು ಸೋತ ನಿಮ್ಮನ್ನು ಅನುಗ್ರಹದಲ್ಲಿಯೇ ಅವರು ಅನುಗ್ರಹಿಸಿದ್ದು ಮರೆತಿರಾ? ಅಂದು ಆ ಕೈ ನಿಮ್ಮ ಕೈ ಹಿಡಿಯದಿದ್ದರೆ ನೀವಿಷ್ಟು ಎತ್ತರಕ್ಕೇರಲು ಸಾಧ್ಯವಿತ್ತೆ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದೆ.
