ಸಂವಿಧಾನವನ್ನು ಇದುವರೆಗೂ 106 ಬಾರಿ ತಿದ್ದುಪಡಿ ಮಾಡಲಾಗಿದೆ. ಈ ಪೈಕಿ 95 ಬಾರಿ ಸಂವಿಧಾನವನ್ನು ತಿದ್ದುಪಡಿ ಮಾಡಿದ್ದು ಕಾಂಗ್ರೆಸ್ ಪಕ್ಷ.
March 11, 2024
ಸಂವಿಧಾನ ಬದಲಾಯಿಸಲು 400 ಸೀಟುಗಳನ್ನು ಮೋದಿಗೆ ಕೊಡಿ ಎಂಬ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದೆ. ಆದರೆ, ಅನಂತ್ ಕುಮಾರ್ ಹೆಗಡೆ ಹೇಳಿರುವುದರಲ್ಲಿ ತಪ್ಪೇನಿದೆ? ಸಂವಿಧಾನ ತಿದ್ದುಪಡಿಗೆ ಸಂವಿಧಾನದಲ್ಲಿಯೇ ಅವಕಾಶ ನೀಡಲಾಗಿದೆ ಎಂದು ಬಿಜೆಪಿ ನಾಯಕ, ಮಾಜಿ ಶಾಸಕ ಸಿಟಿ ರವಿ ಉತ್ತರ ಕನ್ನಡ ಸಂಸದನ ಪರ ಬ್ಯಾಟ್ ಬೀಸಿದ್ದಾರೆ.ಸಂವಿಧಾನವನ್ನು ಇದುವರೆಗೂ 106 ಬಾರಿ ತಿದ್ದುಪಡಿ ಮಾಡಲಾಗಿದೆ. ಈ ಪೈಕಿ 95 ಬಾರಿ ಸಂವಿಧಾನವನ್ನು ತಿದ್ದುಪಡಿ ಮಾಡಿದ್ದು ಕಾಂಗ್ರೆಸ್ ಪಕ್ಷ. ಸಂವಿಧಾನ ತಿದ್ದುಪಡಿಗೆ ಸಂವಿಧಾನದಲ್ಲೇ ಅವಕಾಶ ನೀಡಲಾಗಿದೆ. ಡಾ ಬಿಆರ್ ಅಂಬೇಡ್ಕರ್ ಅವರ ಆಶಯದಂತೆ ಬಿಜೆಪಿ ರಾಜಕಾರಣ ಮಾಡುತ್ತಿದೆ. ಭಾರತ ಒಂದು ರಾಷ್ಟ್ರವೇ ಅಲ್ಲ ಒಕ್ಕೂಟ ಎನ್ನುವವರು ಸಂವಿಧಾನ ವಿರೋಧಿಗಳು ಎಂದು ಕಿಡಿಕಾರಿದರು.
