ಕಾಂಗ್ರೆಸ್‌ಗೆ ಐಟಿ ಮತ್ತೊಂದು ಶಾಕ್;‌ 1,700 ಕೋಟಿ ರೂ. ಟ್ಯಾಕ್ಸ್ ನೋಟಿಸ್‌ ಜಾರಿ‌

Waves of Karnataka


 ಲೋಕಸಭೆ ಚುನಾವಣೆ (Lok Sabha Election 2024) ಹೊಸ್ತಿಲಿನಲ್ಲಿಯೇ ಕಾಂಗ್ರೆಸ್‌ಗೆ (Congress) ಸಾಲು ಸಾಲು ಪೆಟ್ಟುಗಳು ಬೀಳುತ್ತಿವೆ. ಕಾಂಗ್ರೆಸ್‌ ನಾಯಕರ ಬಿಜೆಪಿ ಸೇರ್ಪಡೆ, ಇಂಡಿಯಾ ಒಕ್ಕೂಟದಲ್ಲಿ (India Bloc) ಬಿರುಕಿನ ಮಧ್ಯೆಯೇ ಕಾಂಗ್ರೆಸ್‌ಗೆ ಆದಾಯ ತೆರಿಗೆ ಇಲಾಖೆಯು (Income Tax Department) ಹೊಸ ಶಾಕ್‌ ನೀಡಿದೆ. ಕೆಲ ವರ್ಷಗಳಿಂದ ತೆರಿಗೆ ರಿಟರ್ನ್ಸ್‌ನಲ್ಲಿ ವ್ಯತ್ಯಾಸವಾದ ಹಿನ್ನೆಲೆಯಲ್ಲಿ 1,700 ಕೋಟಿ ರೂಪಾಯಿಯ ಟ್ಯಾಕ್ಸ್‌ ನೋಟಿಸ್‌ (Tax Notice) ಜಾರಿಗೊಳಿಸಿದೆ.