ಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆ! ಎಲ್ಲಿ ಯಾವಾಗ ಎಲೆಕ್ಷನ್? ಇಲ್ಲಿದೆ ಮಾಹಿತಿ!
March 16, 2024
ಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆ! ಎಲ್ಲಿ ಯಾವಾಗ ಎಲೆಕ್ಷನ್? ಇಲ್ಲಿದೆ ಮಾಹಿತಿ!
ಬಹು ನಿರೀಕ್ಷಿತ ಲೋಕಸಭೆ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಲೋಕಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಿದ್ದಾರೆ. ದೇಶಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದೆ..
ಹೌದು.. ಚುನಾವಣಾ ಆಯೋಗದ ಘೋಷಣೆಯಂತೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು 2 ಹಂತದಲ್ಲಿ ನಡೆಯಲಿದೆ. ಶನಿವಾರದಿಂದಲೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫಲಿತಾಂಶ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮೊದಲ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದ್ದರೆ, ಎರಡನೇ ಹಂತದ ಮತದಾನ ಮೇ7 ರಂದು ನಡೆಯಲಿದೆ. ದೇಶಾದ್ಯಂತ ಮತ ಎಣಿಕೆ ಒಂದೇ ದಿನ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಹೊರಬೀಳಲಿದೆ..
ಮೊದಲ ಹಂತದ ಚುನಾವಣಾ ಪ್ರಕ್ರಿಯೆಗೆ ಅಧಿಸೂಚನೆ ಮಾರ್ಚ್ 28 ರಂದು ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 04 ಕೊನೆಯ ದಿನವಾಗಿರುತ್ತದೆ. ಏಪ್ರಿಲ್ 05 ರಂದು ನಾಮಪತ್ರ ಪರಿಶೀಲನೆ ನಡೆದರೆ, ನಾಮಪತ್ರ ವಾಪಸ್ ತೆಗೆದುಕೊಳ್ಳಲು ಏಪ್ರಿಲ್ 08 ಕೊನೆಯ ದಿನವಾಗಿರುತ್ತದೆ. ಇನ್ನೂ ಎರಡನೇ ಹಂತದ ಚುನಾವಣಾ ಪ್ರಕ್ರಿಯೆಗೆ ಅಧಿಸೂಚನೆ ಏಪ್ರಿಲ್ 12ರಂದು ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 19 ಕೊನೆಯ ದಿನವಾಗಿರುತ್ತದೆ. ಏಪ್ರಿಲ್ 20 ರಂದು ನಾಮಪತ್ರ ಪರಿಶೀಲನೆ ನಡೆದರೆ, ನಾಮಪತ್ರ ವಾಪಸ್ ತೆಗೆದುಕೊಳ್ಳಲು ಏಪ್ರಿಲ್ 22 ಕೊನೆಯ ದಿನವಾಗಿರುತ್ತದೆ.
ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿದ್ದು ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿತ್ತು. 25 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರೆ ಕಾಂಗ್ರೆಸ್ ಬೆಂಗಳೂರು ಗ್ರಾಮಾಂತರದಲ್ಲಿ ಮಾತ್ರ ಜಯ ಗಳಿಸಿತ್ತು. ಉಳಿದಂತೆ ಜೆಡಿಎಸ್ ಒಂದು ಸ್ಥಾನ ಹಾಗೂ ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನ ಗಳಿಸಿದ್ದರು
.jpeg)