ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಸಿಎಂ ಡಿವಿ ಸದಾನಂದ ಗೌಡ ರಾಜ್ಯ ಒಕ್ಕಲಿಗ ಸಂಘದ ಪ್ರಮುಖರ ಜೊತೆ ಸಭೆ ನಡೆಸಿದ್ದಾರೆ

Waves of Karnataka


 ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಸಿಎಂ ಡಿವಿ ಸದಾನಂದ ಗೌಡ ರಾಜ್ಯ ಒಕ್ಕಲಿಗ ಸಂಘದ ಪ್ರಮುಖರ ಜೊತೆ ಸಭೆ ನಡೆಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ಕಿಮ್ಸ್ ನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಜೊತೆ ಚರ್ಚೆ ನಡೆಸಿದ್ದಾರೆ.ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಮುಂದಿನ ನಿಲುವಿನ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.