ಮಂಡ್ಯ ಕ್ಷೇತ್ರ ಸುಮಲತಾ ಕೈ ತಪ್ಪುವುದು ಬಹುತೇಕ ಪಕ್ಕಾ? ಇದಕ್ಕೆ ಸುಮಲತಾ ಏನಂದ್ರು?
March 23, 2024
ಈ ವರ್ಷದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಚಾಲ್ತಿಯಲ್ಲಿದೆ. ಬಿಜೆಪಿಯು 25 ಕ್ಷೇತ್ರಗಳಲ್ಲಿ ಹಾಗೂ ಜೆಡಿಎಸ್ ಪಕ್ಷವು ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವುದು ಪಕ್ಕಾ ಆಗಲಿದೆ. ಈ ಹಿನ್ನೆಲೆಯಲ್ಲಿ, ಮಂಡ್ಯ, ಕೋಲಾರ ಹಾಗೂ ಹಾಸನ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡುವ ಸಾಧ್ಯತೆಗಳು ದಟ್ಟವಾಗಿದೆ. ಆದರೆ, ಮಂಡ್ಯ ಕ್ಷೇತ್ರದಲ್ಲಿ ತಮಗೇ ಬಿಜೆಪಿ ಟಿಕೆಟ್ ನೀಡುತ್ತದೆ ಅರ್ಥಾತ್ ಮಂಡ್ಯ ಕ್ಷೇತ್ರವನ್ನು ಬಿಜೆಪಿ ತನ್ನಲ್ಲೇ ಇಟ್ಟುಕೊಳ್ಳಲಿದೆ ಎಂಬುದು ಸುಮಲತಾರವರ ಅಭಿಮತ. ಇದರ ನಡುವೆಯೇ, ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿಯಾಗಿರುವ ರಾಧಾ ಮೋಹನ್ ದಾಸ್ ಅವರು ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಲಾಗುತ್ತದೆ ಎಂದು ಹೇಳಿದ್ದಾರೆ. ಇದು ಹೊಸ ಸಂಚಲನ ಮೂಡಿಸಿದೆ.
Tags
