ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಕಾಂಗ್ರೆಸ್ ಸೇರ್ಪಡೆ; ಇನ್ನೂ ಅನೇಕರು ಬರುತ್ತಾರೆ ಎಂದ ಡಿಕೆಶಿ
March 27, 2024
ಮೈಸೂರು ಲೋಕಸಭಾ ಚುನಾವಣಾ (Lok Sabha Election 2024) ಅಖಾಡಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಂಟ್ರಿ ನೀಡಿದ್ದಾರೆ. ನಗರದ ನಗರದ ಕಾಂಗ್ರೆಸ್ ಭವನದ ಆವರಣದಲ್ಲಿ ಬುಧವಾರ ಚಾಮರಾಜ, ನರಸಿಂಹರಾಜ, ಕೃಷ್ಣರಾಜ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಕೈ ಶಾಸಕರು, ಮುಖಂಡರ ಸಭೆ ನಡೆಸಿದ ಅವರು, ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಕಾರ್ಯಕರ್ತರು, ಮುಖಂಡರಿಗೆ ಹಲವು ಸಲಹೆ-ಸೂಚನೆಗಳನ್ನು ನೀಡಿದರು. ಇದೇ ವೇಳೆ ಮಾಜಿ ಸಚಿವ ಕೋಟೆ ಎಂ.ಶಿವಣ್ಣ, ಮುಡಾ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಎಚ್.ವಿ.ರಾಜೀವ್, ಶಶಿಕಲಾ ನಾಗರಾಜ್ ಅವರು ಕಾಂಗ್ರೆಸ್‌ಗೆ (Operation Hasta) ಸೇರ್ಪಡೆಯಾದರು.
