ಕೋಲಾರ ಕಾಂಗ್ರೆಸ್‌ ಗಲಾಟೆಗೆ ಸಿಎಂ, ಡಿಸಿಎಂ ಟ್ರೀಟ್ಮೆಂಟ್‌! ತಣ್ಣಗಾದ ರಮೇಶ್‌ ಕುಮಾರ್‌, ಮುನಿಯಪ್ಪ ಬಣ

Waves of Karnataka


 ಲೋಕಸಭಾ ಚುನಾವಣೆ (Lok Sabha Election 2024) ಹೊತ್ತಿನಲ್ಲಿ ಕಾಂಗ್ರೆಸ್‌ಗೆ ಒಟ್ಟು ನಾಲ್ಕು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಅದರಲ್ಲಿ ಬಹುಮುಖ್ಯವಾಗಿ ಕೋಲಾರ ಲೋಕಸಭೆ ಕ್ಷೇತ್ರ (Kolar Lok Sabha constituency) ಹಾಗೂ ಪಕ್ಕದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ತಲೆನೋವು ತಂದಿದೆ. ಎರಡೂ ಕ್ಷೇತ್ರಗಳಲ್ಲಿ ಬಣ ರಾಜಕೀಯ ಜೋರಾಗಿಯೇ ಇದೆ. ಕೋಲಾರದಲ್ಲಿ ಕೆ.ಎಚ್.‌ ಮುನಿಯಪ್ಪ (K.H. Muniyappa) ಅವರ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಒಲವು ತೋರಿದೆ ಎಂದು ಮಾಜಿ ಸಚಿವ ರಮೇಶ್ ಕುಮಾರ್ (Ramesh Kumar) ಟೀಮ್ ಕೆರಳಿತ್ತು. ಆದರೆ, ಈಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ ಎಂದು ಎರಡೂ ಬಣದ ನಾಯಕರು ಒಪ್ಪಿದ್ದಾರೆ ಎಂದು ತಿಳಿದು ಬಂದಿದೆ.