ಅಮಿತ್ ಶಾ ʼರೌಡಿʼ ಹೇಳಿಕೆ ಸಮರ್ಥಿಸಿದ ಯತೀಂದ್ರ; ಮೋದಿ ವಿರುದ್ಧವೂ ವಾಗ್ದಾಳಿ
March 31, 2024
ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಗೂಂಡಾ, ರೌಡಿ ಪದ ಬಳಸಿದ ಯತೀಂದ್ರ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ನಾಯಕರು ಅಕ್ರೋಶ ವ್ಯಕ್ತಪಡಿಸಿ, ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ತಮ್ಮ ಹೇಳಿಕೆಯನ್ನು ಸಿಎಂ ಸಿದ್ದರಾಮಯ್ಯ ಅವರ ಪುತ್ರ ಸಮರ್ಥಿಸಿಕೊಂಡಿರುವುದು ಕಂಡುಬಂದಿದೆ. ಕೊಡಗಿನ ವಿರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಪರ ಪ್ರಚಾರದಲ್ಲಿ ಭಾನುವಾರ ಭಾಗವಹಿಸಿದ್ದ ಯತೀಂದ್ರ ಸಿದ್ದರಾಮಯ್ಯ, ಅಮಿತ್ ಶಾ ರೌಡಿ ಎಂದು ನಾನೇ ಹುಟ್ಟಿಸಿಕೊಂಡು ಹೇಳಿದಂತಹ ಮಾತಲ್ಲ, ಈ ಹಿಂದೆ ಸಿಬಿಐ ಕೂಡ ಹೇಳಿತ್ತು ಎಂದು ಹೇಳಿದ್ದಾರೆ.
Tags
