ಯದುವೀರ್ ಸೇರಿ ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
April 01, 2024
ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ (Karnataka) ಬಿಜೆಪಿ ಅಭ್ಯರ್ಥಿಗಳ ನಾಮಪತ್ರ (BJP Nominations) ಸಲ್ಲಿಕೆಯ ಭರಾಟೆ ಜೋರಾಗಿದೆ. ಬೆಂಗಳೂರು ಕೇಂದ್ರದಲ್ಲಿ ಪಿ.ಸಿ. ಮೋಹನ್, ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್ ಸೇರಿ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ಅಭ್ಯರ್ಥಿಗಳು ದೇವಾಲಯಗಳಲ್ಲಿ ವಿಶೇಷ ಪೂಜೆ, ಬೃಹತ್ ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶನವನ್ನೂ ಮಾಡಿದರು.
ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಅವರು ನಾಮಪತ್ರ ಸಲ್ಲಿಸಿದರು. ಇವರಿಗೆ ಪಿ.ಸಿ ಮೋಹನ್ ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಅರವಿಂದ್ ಲಿಂಬಾವಳಿ, ಶಾಸಕ ಸುರೇಶ್ ಕುಮಾರ್ ಅವರು ಸಾಥ್ ನೀಡಿದರು.
Tags
