ಯಾವ ಮುಖ ಇಟ್ಕೊಂಡು ಮೋದಿ ಮತ ಕೇಳ್ತಾರೆ? ಸಿದ್ದರಾಮಯ್ಯ ವಾಗ್ದಾಳಿ

Waves of Karnataka


 ಲೋಕಸಭೆ ಚುನಾವಣೆ (Lok Sabha Election) ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ (ಏಪ್ರಿಲ್‌ 14) ಮೈಸೂರಿಗೆ ಆಗಮಿಸುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ದೇಶದ ಜನರಿಗೆ ಸತತವಾಗಿ ಸುಳ್ಳು ಹೇಳಿದ, ನೀಡಿದ ಭರವಸೆಗಳನ್ನು ಈಡೇರಿಸದ ನರೇಂದ್ರ ಮೋದಿ ಅವರು ಯಾವ ಮುಖ ಇಟ್ಟುಕೊಂಡು ಮತ ಕೇಳಲು ಕರ್ನಾಟಕಕ್ಕೆ ಬರುತ್ತಾರೆ” ಎಂದು ಟೀಕಿಸಿದರು