ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್ ಬಿಜೆಪಿಗೆ ಗುಡ್‌ ಬೈ; ನಾಳೆ ಕಾಂಗ್ರೆಸ್‌ ಸೇರ್ಪಡೆ

Waves of Karnataka


 ನಿತಿನ್‌ ಬಿಜೆಪಿ ಸೇರ್ಪಡೆ ಸಂಬಂಧ ಮಾಲೀಕಯ್ಯ ಗುತ್ತೇದಾರ್‌ ಅವರು ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು. 2018ರ ಚುನಾವಣೆಯಲ್ಲಿ ನಾನು ಬಿಜೆಪಿಯಿಂದ ಗೆಲ್ಲಬೇಕಿತ್ತು. ನಿತಿನ್‌ ಮತ್ತು ಕೆಲವು ಬಿಜೆಪಿ ಮುಖಂಡರು ನನಗೆ ಮೋಸ ಮಾಡಿದರು. 2023ರಲ್ಲಿ ನಿತಿನ್‌ ಸ್ವತಂತ್ರವಾಗಿ ಸ್ಪರ್ಧೆ ಮಾಡಿ ನನ್ನನ್ನು ಸೋಲಿಸಿದ್ದಾನೆ. ಈಗ ಆತನಿಂದ ಕೋಟಿ ಕೋಟಿ ಹಣ ಪಡೆದು ಅವನನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಮಾಲೀಕಯ್ಯ ಗುತ್ತೇದಾರ್‌ ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ.