ಲೋಕಸಭಾ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಕೆ.ಎಸ್‌.ಈಶ್ವರಪ್ಪ ವಿರುದ್ಧ ಬಿಜೆಪಿ ಶಿಸ್ತು ಕ್ರಮ ಕೈಗೊಂಡಿದೆ

Waves of Karnataka


 ಶಿವಮೊಗ್ಗದ ಮಾಜಿ ಶಾಸಕ, ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ಅವರು ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದಾರೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಲೋಕಸಭಾ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.

ಈ ಬಗ್ಗೆ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ, ಮುಂದಿನ 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಈಶ್ವರಪ್ಪ ಅವರಿಗೆ ಆದೇಶ ಪತ್ರದಲ್ಲಿ ಲಿಂಗರಾಜ್ ಪಾಟೀಲ್ ತಿಳಿಸಿದ್ದಾರೆ.