ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಾರಾ ರಾಬರ್ಟ್ ವಾದ್ರಾ?
April 04, 2024
ಲೋಕಸಭಾ ಚುನಾವಣೆ (Lok Sabha Election 2024)ಯ ಕಣ ರಂಗೇರಿದೆ. ರಾಜಕೀಯ ಪಕ್ಷಗಳು ಅಳೆದೂ ತೂಗಿ ಸಮರ್ಥ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿವೆ. ಈ ಮಧ್ಯೆ ಗುರುವಾರ (ಏಪ್ರಿಲ್ 4) ಉದ್ಯಮಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಅವರ ಪತಿ ರಾಬರ್ಟ್ ವಾದ್ರಾ (Robert Vadra) ಹೇಳಿಕೆಯೊಂದನ್ನು ನೀಡಿ ಮುಂದೊಂದು ದಿನ ರಾಜಕೀಯಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದಾರೆ. ಅಮೇಥಿ ಕ್ಷೇತ್ರದಿಂದ ಹಾಲಿ ಸಂಸದೆ ಸ್ಮೃತಿ ಇರಾನಿ (Smriti Irani) ವಿರುದ್ಧ ನಾನು ಸ್ಪರ್ಧಿಸಬೇಕೆಂದು ಜನರು ಬಯಸುತ್ತಾರೆ ಎಂದು ಅವರು ಹೇಳಿದ್ದಾರೆ.
Tags
