ಕಾಂಗ್ರೆಸ್ಸಿನ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ ಕಟ್ಟಾ ಅನುಯಾಯಿ ಬಿಜೆಪಿ ಸೇರ್ಪಡೆ
April 12, 2024
ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ಸಿನ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ ಕಟ್ಟಾ ಅನುಯಾಯಿ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಆಪ್ತ ಬಳಗದಲ್ಲಿದ್ದ ನಗರಸಭೆ ಮಾಜಿ ಅಧ್ಯಕ್ಷ, ಪಾಲಿಕೆ ಮಾಜಿ ಸದಸ್ಯ ಶಿವನಹಳ್ಳಿ ರಮೇಶ ಹಾಗೂ ಹಿರಿಯ ಮುಖಂಡ ಬೆಳ್ಳೂಡಿ ಮಂಜುನಾಥ ಹಾಗೂ ಬೆಂಬಲಿಗರು ಗುರುವಾರ ಮಾಜಿ ಸಚಿವ ಎಸ್.ಎ. ರವೀಂದ್ರನಾಥ, ಸಂಸದ ಜಿ.ಎಂ. ಸಿದ್ದೇಶ್ವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ ಆಗುವುದರೊಂದಿಗೆ ರಾಜಕೀಯ ಸಂಚಲನಕ್ಕೆ ಕಾರಣವಾಗಿದ್ದಾರೆ.
