ಕರ್ನಾಟಕದಲ್ಲಿ ಪ್ರಚಾರಕ್ಕೆ‌ ಬರಲಿದ್ದಾರೆ ಪ್ರಿಯಾಂಕಾ, ರಾಹುಲ್‌ ಗಾಂಧಿ; ಮಹಿಳಾ ಮತಕ್ಕೆ ಕಾಂಗ್ರೆಸ್‌ ಪ್ಲ್ಯಾನ್

Waves of Karnataka


 ರಾಹುಲ್ ಗಾಂಧಿ ಅವರನ್ನು ಕರೆಸಿ ದಳಪತಿಗಳ ಕೋಟೆಯಾದ ಹಾಸನದಲ್ಲಿ ಪ್ರಚಾರ ನಡೆಸಲು ಚಿಂತನೆ ನಡೆಸಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಿ ಟೀಮ್ ಜೆಡಿಎಸ್ ಎಂದು ರಾಹುಲ್ ಗಾಂಧಿ ಕರೆದಿದ್ದರು. ಈಗ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದೆ. ಹೀಗಾಗಿ ರಾಹುಲ್‌ ಗಾಂಧಿಯವರಿಂದ ಮತ್ತೊಮ್ಮೆ ಇದೇ ಬಾಂಬ್‌ ಹಾಕಿಸಲು ಚಿಂತನೆ ನಡೆಸಲಾಗಿದೆ. ಇದರಿಂದ ಹಾಸನ ಮತ್ತು ಸುತ್ತಮುತ್ತಲಿನ ಕ್ಷೇತ್ರಗಳಲ್ಲಿ ಮತಗಳನ್ನು ಸೆಳೆಯಲು ತಂತ್ರ ಹೂಡಲಾಗಿದೆ ಎನ್ನಲಾಗಿದೆ. ಈ ಮೂಲಕ ಮೈತ್ರಿಗೆ ಟಕ್ಕರ್ ಕೊಡುವ ಲೆಕ್ಕಾಚಾರವನ್ನು ಹಾಕಿಕೊಳ್ಳಲಾಗಿದೆ.