ಅಂದು ಮೋದಿ ಜತೆ ವೇದಿಕೆ ಏರಲು ನಿರಾಕರಿಸಿದ್ದ ನಿತೀಶ್ ಕುಮಾರ್ ಈಗ ಮೋದಿಯ ಕಾಲು ಮುಟ್ಟಿ ನಮಸ್ಕರಿಸಿದರು

Waves of Karnataka


 ಬಿಹಾರದ ನವಾಡಾದಲ್ಲಿ ನಡೆದ ಎನ್‌ಡಿಎ (NDA) ಮೈತ್ರಿಕೂಟದ ಚುನಾವಣಾ ಪ್ರಚಾರ ಸಭೆ ಅಚ್ಚರಿಯೊಂದಕ್ಕೆ ಸಾಕ್ಷಿಯಾಯಿತು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ತಮ್ಮೊಂದಿಗೆ ವೇದಿಕೆ ಹಂಚಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಕಾಲು ಮುಟ್ಟಿ ನಮಸ್ಕರಿಸಿದರು. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ (Viral Video) ಆಗಿದೆ.