ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುತ್ತಿದ್ದೇನೆ ಎಂದು ಹಾಲಿ ಸಂಸದೆ ಸುಮಲತಾ ಅಂಬರೀಶ್‌ (Sumalatha Ambareesh) ಘೋಷಣೆ ಮಾಡಿದ್ದಾರೆ

Waves of Karnataka


 ಪ್ರಸಕ್ತ ಸಾಲಿನ ಲೋಕಸಭಾ ಚುನಾವಣಾ (Lok Sabha Election 2024) ಕಣದಿಂದ ಹಿಂದೆ ಸರಿದಿದ್ದೇನೆ. ನಾನು ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುತ್ತಿದ್ದೇನೆ ಎಂದು ಹಾಲಿ ಸಂಸದೆ ಸುಮಲತಾ ಅಂಬರೀಶ್‌ (Sumalatha Ambareesh) ಘೋಷಣೆ ಮಾಡಿದ್ದಾರೆ. ಈ ಮೂಲಕ ಬಿಜೆಪಿ ಸೇರ್ಪಡೆ ಬಗ್ಗ ಸ್ಪಷ್ಟ ಸಂದೇಶವನ್ನು ನೀಡಿದರು. ಇದು ನನ್ನ ಕಾರ್ಯಕರ್ತರ ಹಾಗೂ ಮಂಡ್ಯ ಜಿಲ್ಲೆಯ ಜನತೆಯ ಹಿತಕ್ಕಾಗಿ ತೆಗೆದುಕೊಂಡ ನಿರ್ಧಾರವಾಗಿದೆ. ಮಂಡ್ಯವೇ ನನ್ನ ಕರ್ಮ ಭೂಮಿ. ಹೀಗಾಗಿ ನನ್ನ ರಾಜಕಾರಣ ಮಂಡ್ಯ ಬಿಟ್ಟು ಒಂದಿಂಚೂ ಸಾಗದು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ (Mandya Lok Sabha constituency) ಈ ಮೂಲಕ ಮಂಡ್ಯ ಚುನಾವಣಾ ಕಣದಲ್ಲಿ ಕಾಂಗ್ರೆಸ್‌ ವರ್ಸಸ್‌ ಎನ್‌ಡಿಎ ಅಭ್ಯರ್ಥಿ ಎಂಬುದು ಫೈನಲ್‌ ಆಗಿದೆ.