3ನೇ ಸಲ ಗೆಲ್ಲಿಸಿದ ವಾರಾಣಸಿ ಜನತೆಗೆ ಧನ್ಯವಾದ ಎಂದ ಮೋದಿ; ಗೆದ್ದ ಬಳಿಕ ಮೊದಲ ಭೇಟಿ!

Waves of Karnataka


 ಲೋಕಸಭೆ ಚುನಾವಣೆ (Lok Sabha Election 2024) ಬಳಿಕ ಇದೇ ಮೊದಲ ಬಾರಿಗೆ ತಮ್ಮ ಲೋಕಸಭೆ ಕ್ಷೇತ್ರವಾದ ವಾರಾಣಸಿಗೆ (Varanasi) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ (ಜೂನ್‌ 18) ಭೇಟಿ ನೀಡಿದ್ದಾರೆ. ವಾರಾಣಸಿಯಲ್ಲಿ ನಡೆದ ಕಿಸಾನ್ ಸಮ್ಮೇಳನದಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ (PM Kisan Nidhi Samman) ಯೋಜನೆಯ 20 ಸಾವಿರ ಕೋಟಿ ರೂಪಾಯಿಯನ್ನು ದೇಶದ 9.26 ಕೋಟಿ ರೈತರ ಖಾತೆಗಳಿಗೆ ಜಮೆ ಮಾಡಿದ ಬಳಿಕ ಅವರು ಮಾತನಾಡಿದರು. “ಲೋಕಸಭೆ ಚುನಾವಣೆಯಲ್ಲಿ ನೀವು ನನ್ನನ್ನು ಮೂರನೇ ಬಾರಿಗೆ ಸಂಸದನಾಗಿ ಮಾತ್ರವಲ್ಲ, ಮೂರನೇ ಬಾರಿಗೆ ದೇಶದ ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದೀರಿ. ನಿಮಗೆ ನನ್ನ ಧನ್ಯವಾದಗಳು” ಎಂದು ಹೇಳಿದರು.