ಅಭಿವೃದ್ಧಿ ಕೆಲಸಗಳಿಗೆ ಬಳಕೆ: ಇಂಧನ ಬೆಲೆ ಏರಿಕೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

Waves of Karnataka


 ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಗೆ ಲಾಭ ಕೊಡಲಿಲ್ಲ. ಈ ಮಧ್ಯೆ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂಬ ಆರೋಪಗಳು ಹೆಚ್ಚಾಗುತ್ತಿದೆ. ಇದರ ನಡುವೆ ರಾಜ್ಯ ಸರ್ಕಾರ ನಿನ್ನೆ ಇಂಧನ ಬೆಲೆಯಲ್ಲಿ 3 ರೂಪಾಯಿ ಹೆಚ್ಚಳ ಘೋಷಿಸಿತ್ತು. ಈ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಬೆಲೆ ಏರಿಕೆಯ ಹೊರತಾಗಿಯೂ, ರಾಜ್ಯದಲ್ಲಿ ಇಂಧನ ಬೆಲೆ ದೇಶದ ಇತರ ಅನೇಕ ರಾಜ್ಯಗಳಿಗಿಂತ ಕಡಿಮೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಶೇಕಡ 29.84ರಷ್ಟು ಮತ್ತು ಡೀಸೆಲ್ ಮೇಲೆ ಶೇಕಡ 18.44ರಷ್ಟು ಹೆಚ್ಚಿಸಿದೆ. ಈ ಹೆಚ್ಚಳದ ನಂತರವೂ, ಇಂಧನದ ಮೇಲಿನ ನಮ್ಮ ರಾಜ್ಯದ ತೆರಿಗೆಗಳು ದಕ್ಷಿಣ ಭಾರತದ ಹೆಚ್ಚಿನ ರಾಜ್ಯಗಳು ಮತ್ತು ಮಹಾರಾಷ್ಟ್ರದಂತಹ ಆರ್ಥಿಕ ಗಾತ್ರದ ರಾಜ್ಯಗಳಿಗಿಂತ ಕಡಿಮೆ ಇದೆ ಎಂದು ಎಕ್ಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.