ಕರ್ನಾಟಕಕ್ಕೆ ಅನ್ಯಾಯ- ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ರಾಜ್ಯ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಸವಾಲು

Waves of Karnataka


 ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿರುವ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಬಿಜೆಪಿಯವರು ಕರ್ನಾಟಕಕ್ಕೆ ಆಗಿರುವ ಅನ್ಯಾಯದ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಕರ್ನಾಟಕ ಸರ್ಕಾರ ಶನಿವಾರದಂದು ಮಾರಾಟ ತೆರಿಗೆಯನ್ನು ಹೆಚ್ಚಿಸಲು ನಿರ್ಧರಿಸಿದ ನಂತರ ಪೆಟ್ರೋಲ್ ಬೆಲೆ ಲೀಟರ್‌ಗೆ ಮೂರು ಮತ್ತು ಡೀಸೆಲ್ ಲೀಟರ್‌ಗೆ 3.5 ರೂ.ಗಳಷ್ಟು ಏರಿಕೆಯಾಗಿದೆ.