HD Kumaraswamy: ಎಚ್‌ಎಂಟಿ ಕಾರ್ಖಾನೆಗೆ ಮರು ಜೀವ: ಎಚ್.ಡಿ. ಕುಮಾರಸ್ವಾಮಿ

Waves of Karnataka


 ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy), ಬೆಂಗಳೂರಿನಲ್ಲಿ ಶನಿವಾರ ಎಚ್‌ಎಂಟಿ (HMT) (ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್) ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ಕಂಪನಿಯ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ ಸೇರಿದಂತೆ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಸಚಿವರು, ಕಂಪನಿಯ ಕಾರ್ಯ ಚಟುವಟಿಕೆ ಬಗ್ಗೆ ಪ್ರಾತ್ಯಕ್ಷಿಕೆ ವೀಕ್ಷಿಸಿ ಸಮಗ್ರ ಮಾಹಿತಿ ಪಡೆದುಕೊಂಡರು.

ವಹಿವಾಟು, ನಿವ್ವಳ ಲಾಭ ಇತ್ಯಾದಿಗಳ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವರು, ಕಂಪನಿಯ ಆರ್ಥಿಕತೆ, ಉತ್ಪಾದನೆ, ಇನ್ನಿತರೆ ಸ್ಥಿತಿಗತಿಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದರು.