ಮುಡಾ ಹಗರಣ: 14 ನಿವೇಶನಗಳನ್ನು ವಾಪಸ್ ನೀಡುವಂತೆ ಸಿದ್ದರಾಮಯ್ಯ ಪತ್ನಿಗೆ ಸಲಹೆ ನೀಡಿದ್ದು ಕಪಿಲ್ ಸಿಬಲ್

Waves of Karnataka


 ಹಿರಿಯ ವಕೀಲ ಹಾಗೂ ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ ಅವರ ಸಲಹೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮಂಜೂರು ಮಾಡಿದ್ದ 14 ನಿವೇಶನಗಳನ್ನು ಒಪ್ಪಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಒಳಪಡಿಸಲು ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದನ್ನು ಹಿರಿಯ ವಕೀಲ ಮತ್ತು ರಾಜ್ಯಸಭಾ ಸದಸ್ಯ ಅಭಿಷೇಕ್ ಮನು ಸಿಂಘ್ವಿ ಪ್ರಶ್ನಿಸಿದ್ದರು, ಆದರೆ ಪ್ರಾಸಿಕ್ಯೂಷನ್ ರದ್ದಾಗದ ಕಾರಣ ನಿವೇಶನ ವಾಪಸ್ ನೀಡುವಂತೆ ಕಪಿಲ್ ಸಿಬಲ್ ಸಲಹೆ ನೀಡಿದ್ದಾರೆ, ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಸಿಬಲ್ ಈ ರೀತಿ ಮಾಡಲು ಸೂಚಿಸಿದ್ದಾರೆ ಎಂದು ಹೇಳಲಾಗಿದೆ.