ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Waves of Karnataka


 ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಮತ್ತು ಅವರ ಗೆಳತಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಶನಿವಾರ ಕೋರ್ಟ್ ಅಕ್ಟೋಬರ್ 8ಕ್ಕೆ ಮುಂದೂಡಿದೆ.

ಜಾಮೀನು ಕೋರಿ ದರ್ಶನ್ ಹಾಗೂ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯಾ ವಿಚಾರಣೆ ನಡೆಸಿದ 57ನೇ ಸಿಸಿಎಚ್ ನ್ಯಾಯಾಲಯ, ವಿಚಾರಣೆಯನ್ನು ಅಕ್ಟೋಬರ್ 8ಕ್ಕೆ ಮುಂದೂಡಿದೆ.

ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ಅವರು ಸುದೀರ್ಘ ವಾದ ಮಂಡಿಸಿದ್ದು, ವಾದ ಮಂಡನೆ ಮುಕ್ತಾಯವಾಗಿದೆ. ಅಕ್ಟೋಬರ್ 8 ರಂದು ಎಸ್ ಪಿಪಿ ಪ್ರಸನ್ನ ಕುಮಾರ್ ವಾದ ಮಂಡನೆ ಮಾಡಲಿದ್ದಾರೆ.