ಕಾಂಗ್ರೆಸ್ ನಲ್ಲಿ ದಲಿತ ಸಿಎಂ ಚರ್ಚೆ ಜೋರಾಗಿ ನಡೆಯುತ್ತಿರುವಂತೆಯೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಪವರ್ ಸೆಂಟರ್’ ಆಗಿ ಬದಲಾಗಿದೆ. ಡಿ.ಕೆ. ಸುರೇಶ್ ಸೇರಿದಂತೆ ಹಲವು ರಾಜಕೀಯ ನಾಯಕರು ಸೋಮವಾರ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡಾ ಸತೀಶ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ
ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಅನೇಕ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗುತ್ತಿದ್ದಾರೆ. ಡಿಕೆ ಶಿವಕುಮಾರ್ ಕೂಡಾ ನಿನ್ನೆ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳಬಹುದು ಎಂದರು.
ಸತೀಶ್ ಜಾರಕಿಹೊಳಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ರೈತರು ಹಾಗೂ ಶಾಲೆಗೆ ಹೋಗುವ ಮಕ್ಕಳಿಗೆ ತೊಂದರೆಯಾಗುತ್ತಿರುವ ರಾಜ್ಯ ಹೆದ್ದಾರಿಯಲ್ಲಿನ ಎರಡು ಟೋಲ್‌ಗಳನ್ನು ಸ್ಥಳಾಂತರಿಸುವಂತೆ ಒತ್ತಾಯಿಸಲಾಗಿದೆ ಎಂದು ತಿಳಿಸಿದರು.
