ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಬಿಜೆಪಿ ವಿರುದ್ಧ ಸಚಿವ ದಿನೇಶ್ ಗುಂಡೂ ರಾವ್ ಅವರು ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ.
ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದನ್ನು ಉಲ್ಲೇಖಿಸಿ ಅವರಿಗೆ ಘೋಷಣೆಯಾಗಿದ್ದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ಕ್ರಮ ಶ್ಲಾಘನೀಯ. ಆದರೆ ಬಿಎಸ್ ಯಡಿಯೂರಪ್ಪ ವಿರುದ್ಧದ ಪ್ರಕರಣದಲ್ಲಿ ಭಿನ್ನ ನಿಲುವು ಏಕೆ ಎಂದು ಸಚಿವರು ಪ್ರಶ್ನಿಸಿದ್ದಾರೆ
.ಲೈಂಗಿಕ ಕಿರುಕುಳ ಆರೋಪ, ತನಿಖೆ ಅಥವಾ ವಿಚಾರಣೆ ಎದುರಿಸುತ್ತಿರುವ ಯಾರನ್ನೂ ಗೌರವಿಸಬಾರದು. ಜಾನಿ ಮಾಸ್ಟರ್ ಪ್ರಕರಮದಲ್ಲಿ ಕೇಂದ್ರ ಸರ್ಕಾರದ ಉತ್ತಮ ನಿರ್ಧಾರ ತೆಗೆದುಕೊಂಡಿದೆ. ಆದರೆ, ಯಡಿಯೂರಪ್ಪನವರ ವಿಷಯಕ್ಕೆ ಬಂದಾಗ ಪಕ್ಷವು ಅದೇ ಮಾನದಂಡವನ್ನು ಅನುಸರಿಸಿಲ್ಲ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ
