ರೇಣುಕಾಸ್ವಾಮಿ ಕೊಲೆ ಪ್ರಕರಣ: ತುಮಕೂರು ಜೈಲಿನಿಂದ ಡಿ ಗ್ಯಾಂಗ್ ನ ಮೂವರು ರಿಲೀಸ್!

Waves of Karnataka


 ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಜಾಮೀನು ಸಿಕ್ಕ ಬಳಿಕವೂ ಬಿಡುಗಡೆಯಾಗದೇ ಪರದಾಡುತ್ತಿದ್ದ ಮೂವರು ಆರೋಪಿಗಳು ಇಂದು ತುಮಕೂರು ಜೈಲಿನಿಂದ ರಿಲೀಸ್ ಆಗಿದ್ದಾರೆ. ಸೆ.23 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್, ಹಾಗೂ ನಿಖಿಲ್‌ಗೆ ಷರತ್ತುಬದ್ಧ ಜಾಮೀನು ದೊರೆತಿತ್ತು

ಎ-16 ಆರೋಪಿ ಕೇಶವಮೂರ್ತಿಗೆ ಹೈಕೋಟ್‌ನಿಂದ ಹಾಗೂ ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್‌ಗೆ 57ನೇ ಸಿಸಿಹೆಚ್ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿತ್ತು. ಕೋರ್ಟ್ 2 ಲಕ್ಷ ರೂ. ಹಣ ಹಾಗೂ ಇಬ್ಬರು ಶೂರಿಟಿದಾರರನ್ನ ಹೊಂದಿಸಲು ಆರೋಪಿಗಳ ಕುಟುಂಬಸ್ಥರಿಗೆ ಸೂಚಿಸಿತ್ತು. ಆದರೆ ಜಾಮೀನು ಶ್ಯೂರಿಟಿಗೂ ಹಣವಿಲ್ಲದೇ ಆರೋಪಿಗಳ ಕುಟುಂಬಸ್ಥರು ಪರದಾಡುತ್ತಿದ್ದರು.

ಮಂಗಳವಾರ ರಾತ್ರಿ ತುಮಕೂರು ಜೈಲಾಧಿಕಾರಿಗಳಿಗೆ ಜಮೀನು ಆದೇಶದ ಪ್ರತಿ ಮೇಲ್ ಮೂಲಕ ತಲುಪಿದ್ದು, ಜಾಮೀನು ಆದೇಶ ಪ್ರತಿ ಮೇಲ್ ಮೂಲಕ ತಲುಪಿದ್ದು, ಇಂದು ಬಿಡುಗಡೆ ಪ್ರಕ್ರಿಯೆ ಮುಗಿಸಿ ಮೂವರು ಆರೋಪಿಗಳನ್ನ ಜೈಲಿನಿಂದ ರಿಲೀಸ್ ಮಾಡಲಾಗಿದೆ