ಬಿಜೆಪಿ ಆರೋಪ: 'ಒಳ ಮೀಸಲಾತಿ ಜಾರಿಯಲ್ಲಿ ವಿಳಂಬ; 101 ಪರಿಶಿಷ್ಟ ಜಾತಿಗಳ ಹಿತಾಸಕ್ತಿ ರಕ್ಷಿಸುವಲ್ಲಿ ಸರ್ಕಾರ ವಿಫಲ

Waves of Karnataka


 ರಾಜ್ಯ ಸರ್ಕಾರ ಒಳ ಮೀಸಲಾತಿ ಕುರಿತು ಗೊಂದಲ ಸೃಷ್ಟಿಸುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಯಾಗಬೇಕು. 101 ಜಾತಿಗಳಿಗೆ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಸಿಗಬೇಕೆಂದು ಮೂರು ದಶಕದಿಂದ ನಿರಂತರ ಹೋರಾಟ ಮಾಡಲಾಗಿತ್ತು. ಪ್ರಧಾನಿ ಮೋದಿ ಸರ್ಕಾರ ಮುತುವರ್ಜಿ ವಹಿಸಿ ನ್ಯಾಯ ದೊರಕಿಸಿಕೊಟ್ಟು ಒಂದು ವರ್ಷವಾದರೂ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಾ ಗೊಂದಲ ಸೃಷ್ಟಿಸುತ್ತಿದೆ ಎಂದು ಟೀಕಿಸಿದರು.

ಒಂದು ಜಾತಿಯ ಹಿತಕ್ಕಾಗಿ ಸಿದ್ದರಾಮಯ್ಯ ಈ ರೀತಿ ಆಟ ಆಡುತ್ತಿದ್ದಾರೆ. 101 ಜಾತಿಯ ಹಿತ ಕಾಯಲು ಅವರು ಬಯಸುತ್ತಿಲ್ಲ. ಅವರದ್ದೇ ಸರ್ಕಾರ ನೇಮಿಸಿದ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಮಂಡಿಸಿದ ವರದಿಯನ್ನು ಸರ್ಕಾರ ಸ್ವೀಕರಿಸಿಲ್ಲ. ಆರ್ಥಿಕ ಸಂಕಷ್ಟ ಇರುವುದರಿಂದ ನೇಮಕಾತಿ ಮುಂದೂಡಿಕೆಯಾದಷ್ಟೂ ಒಳ್ಳೆಯದೆಂಬ ಭಾವನೆ ಅವರಿಗಿದೆ. ಖಜಾನೆ ಖಾಲಿ ಆಗಿದ್ದು, ನೇಮಕಾತಿ ಮಾಡಲೂ ಅವರು ತಯಾರಿಲ್ಲ ಎಂದು ದೂರಿದರು