ಕಳೆದ (2023) ವಿಧಾನಸಭಾ ಚುನಾವಣೆಗೆ ಮೊದಲು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ವಿಶ್ವನಾಥ್ ಅವರನ್ನು ಹಿಂದಿನ ಬಿಜೆಪಿ ಸರ್ಕಾರ ಬಿ ಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಎಂಎಲ್ ಸಿ ಯಾಗಿ ನಾಮನಿರ್ದೇಶನ ಮಾಡಿತ್ತು. ಆದರೆ ಕಳೆದ (2024) ಲೋಕಸಭಾ ಚುನಾವಣೆಯ ನಂತರ ವಿಶ್ವನಾಥ್ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಬೆಂಬಲಿಸಿ ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದರು. ಬಿಹಾರ ಚುನಾವಣೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಕುಮಾರ್ ಅವರಿಗೆ ದಾರಿ ಮಾಡಿಕೊಡಬೇಕಾಗುತ್ತದೆ ಎಂಬ ಮಾತುಕತೆಯ ಹಿನ್ನೆಲೆಯಲ್ಲಿ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.
ಮಾಜಿ ಸಂಸದ ಪ್ರತಾಪ ಸಿಂಹ–ಶಾಸಕ ಪ್ರದೀಪ್ ಈಶ್ವರ್ ನಡುವಿನ ಹೇಳಿಕೆಗಳ ಜಟಾಪಟಿ ಅಸಹ್ಯ ಮೂಡಿಸುವಂತಿದೆ. ತಾಯಿ ಕುರಿತೆಲ್ಲಾ ಮಾತನಾಡುತ್ತಾರೆ ಎಂದರೆ ಏನರ್ಥ? ಇಂತಹ ಅನಾಗರಿಕ ಹೇಳಿಕೆಗಳು ಹಾಗೂ ಕೀಳುಮಟ್ಟದ ರಾಜಕಾರಣ ಸರಿಯಲ್ಲ. ಅವರಿಬ್ಬರನ್ನೂ ಒದ್ದು ಒಳಗೆ ಹಾಕಬೇಕು ಎಂದು ಕಿಡಿ ಕಾರಿದ್ದಾರೆ
