ಗ್ಯಾರಂಟಿ ಯೋಜನೆ ಕುರಿತ ಆರ್.ವಿ.ದೇಶಪಾಂಡೆ ಹೇಳಿಕೆ ಕುರಿತು ಅಶೋಕ್ ಅವರು ಪ್ರತಿಕ್ರಿಯೆ

Waves of Karnataka


 ಗ್ಯಾರಂಟಿ ಯೋಜನೆ ಕುರಿತ ಆರ್.ವಿ.ದೇಶಪಾಂಡೆ ಹೇಳಿಕೆ ಕುರಿತು ಅಶೋಕ್ ಅವರು ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಹಿನ್ನೆಡೆ ಆಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಹೇಳಿರುವುದು ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಗಳು ರಾಜ್ಯವನ್ನ ಯಾವ ಅಧೋಗತಿಗೆ ತಳ್ಳಿದೆ ಎನ್ನುವುದಕ್ಕೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ ಎಂದು ಹೇಳಿದ್ದಾರೆ.

ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕು ಎನ್ನುವ ಹಪಹಪಿಯಿಂದ ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆಗಳನ್ನು ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಈಗ ಗ್ಯಾರೆಂಟಿಗಳು ಬಿಸಿ ತುಪ್ಪವಾಗಿದೆ.