ಲೂಟಿ ಆರೋಪಕ್ಕೆ ಡಿಕೆಶಿ ತಿರುಗೇಟು: "ನಾನು ಲೂಟಿ ಮಾಡಿದ್ದರೆ ಕುಮಾರಸ್ವಾಮಿ ಎತ್ತಿಕೊಂಡು ಹೋಗಲಿ"
October 27, 2025
ಖಾತೆ ಹೆಸರಲ್ಲಿ ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, "ಲೂಟಿ ಮಾಡಿದ ಹಣ ಜೇಬಿನಲ್ಲಿದ್ದರೆ ಎತ್ತುಕೊಂಡು ಹೋಗಲಿ ಅವರು" ಎಂದು ತಿರುಗೇಟು ನೀಡಿದರು. "ಎ ಖಾತೆ, ಬಿ ಖಾತೆ ಬಗ್ಗೆ ಕೇವಲ ಟೀಕೆ ಮಾತ್ರ ಅದರಲ್ಲಿ ಯಾವುದೇ ಸಲಹೆ ಸೂಚನೆಗಳಿಲ್ಲ. ಬಿ ಖಾತೆಗಳನ್ನು ಬಿಜೆಪಿ ಅವಧಿಯಲ್ಲಿ ಮಾಡಲಾಯಿತು. ಇದನ್ನು ಮಾಡಲು ಹೇಳಿದವರು ಯಾರು? ಈಗ ಜನರು ಆಸ್ತಿ ಖರೀದಿ ಮಾಡಿದ್ದಾರೆ. ಆದರೆ ಯಾರಿಗೂ ಬ್ಯಾಂಕ್ ಗಳಿಂದ ಸಾಲ ದೊರೆಯುತ್ತಿಲ್ಲ. ಈಗ ಆ ಜಾಗದಲ್ಲಿ ಕಟ್ಟಿರುವ ಕಟ್ಟಡಗಳನ್ನು ಒಡೆದು ಹಾಕಲು ಆಗುತ್ತದೆಯೇ? ಈ ಹಿಂದೆ ಬೆಂಗಳೂರು ಪಕ್ಕದ ಹಳ್ಳಿಗಳಲ್ಲಿ ನಿವೇಶನ ಖರೀದಿ ಮಾಡಿದ್ದಾರೆ. ಈಗ ನಗರದ ಒಳಗೆ ಸೇರಿಕೊಂಡಿದೆ. ನಾವು ಅಂತಹ ಆಸ್ತಿಗಳನ್ನು ಗಟ್ಟಿ ಮಾಡುವ ಕೆಲಸ ಮಾಡುತ್ತಿದ್ದೇವೆ" ಎಂದರು.
