ಭವಿಷ್ಯದಲ್ಲಿ ಬೆಂಗಳೂರು ಬೃಹತ್ ಆಕಾರದಲ್ಲಿ ಬೆಳೆಯುತ್ತದೆ. ಬೆಂಗಳೂರು ಮಹಾನಗರ ಪ್ರಾದೇಶಿಕ ಅಭಿವೃದ್ಧಿ ಪ್ರಾಧಿಕಾರ (ಬಿಎಂಆರ್‌ಡಿಎ) ವ್ಯಾಪ್ತಿಗೆ ಬರುವ ಪ್ರದೇಶಗಳು ಇಂದು ಅಲ್ಲ, ನಾಳೆ ಬೆಂಗಳೂರು ನಗರದ ಭಾಗವಾಗುತ್ತವೆ, ಹೊರಗಿನ ಪ್ರದೇಶಗಳು ಅಭಿವೃದ್ಧಿ ಕಾಣುತ್ತಿರುವುದರಿಂದ, ಒಂದು ಮಾಸ್ಟರ್ ಪ್ಲಾನ್ ಸಿದ್ಧಪಡಿಸಬೇಕಾಗುತ್ತದೆ ಎಂದರು.
ರಸ್ತೆ ಅಗಲೀಕರಣ ಮತ್ತು ಇತರ ಮೂಲಸೌಕರ್ಯ ಅಭಿವೃದ್ಧಿಯನ್ನು ತಕ್ಷಣವೇ ಮಾಡಬೇಕಾಗಿದೆ. ಇದಕ್ಕಾಗಿ ಸರಿಯಾದ ಯೋಜನೆಯನ್ನು ರೂಪಿಸಬೇಕಾಗಿದೆ. ಸಿಎಂಸಿ ಮತ್ತು ಪಟ್ಟಣ ಪಂಚಾಯತ್ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ರಸ್ತೆಗಳು ಕಿರಿದಾಗಿವೆ. ಭವಿಷ್ಯದಲ್ಲಿ ಇದನ್ನು ಬದಲಾಯಿರುವುದು ಕಷ್ಟಕರವಾಗಿರುತ್ತದೆ. ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಮತ್ತು ನಗರ ಯೋಜನಾ ಇಲಾಖೆಗೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಸೂಚನೆ ನೀಡಿದ್ದೇನೆಂದು ಮಾಹಿತಿ ನೀಡಿದರು.
