ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಸಿಎಂ-ಡಿಸಿಎಂ ಯತ್ನ; ರಾಹುಲ್ ಗಾಂಧಿ ಭೇಟಿ ಅನಿಶ್ಚಿತ.

Waves of Karnataka


 ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ಭೇಟಿ ನೀಡುತ್ತಿದ್ದು, ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲು ಉತ್ಸುಕರಾಗಿದದಾರೆ. ಆದರೆ, ಈ ಭೇಟಿ ಸಾಧ್ಯತೆ ಕಡಿಮೆ ಇದೆ ಎಂದು ಹೇಳಲಾಗುತ್ತಿದೆ.


ನಾಯಕತ್ವ ಬದಲಾವಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಗೊಂದಲ ಸೃಷ್ಟಿಸಿದ್ದು, ದೆಹಲಿ ಭೇಟಿ ವೇಳೆ ರಾಹುಲ ಗಾಂಧಿಯವರನ್ನು ಭೇಟಿ ಮಾಡಿ, ಈ ವಿಚಾರದ ಬಗ್ಗೆ ಚರ್ಚಿಸಲು ಚಿಂತನೆ ನಡೆಸಿದ್ದಾರೆಂದು ತಿಳಿದುಬಂದಿದೆ.


ಆದರೆ, ರಾಹುಲ್ ಗಾಂಧಿಯವರು ಬಿಹಾರ ಚುನಾವಣಾ ಫಲಿತಾಂಶದ ಮರು ದಿನವೇ ನವೆಂಬರ್ 15ರಿಂದ 10 ದಿನಗಳ ಭೇಟಿಗಾಗಿ ಫಿನ್ಲ್ಯಾಂಡ್‌ಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಾರೆಂದು ಪಕ್ಷದ ಮೂಲಗಳು ಮಾಹಿತಿ ನೀಡಿದೆ.


ರಾಹುಲ್ ಗಾಂಧಿ ವಿದೇಶಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆ ವಿಷಯದ ಬಗ್ಗೆ ಚರ್ಚಿಸಲು ದೆಹಲಿಗೆ ಭೇಟಿ ನೀಡದಂತೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸೇರಿದಂತೆ ರಾಜ್ಯದ ಇತರೆ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ ಎಂದು ಮೂಲವೊಂದು ತಿಳಿಸಿದೆ.