ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಫ್ ಐಆರ್ ದಾಖಲಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಇದು ಅನ್ಯಾಯ. ಯಾರಿಗೆ ಆಗಲಿ ಕಿರುಕುಳ ನೀಡುವುದಕ್ಕೆ ಒಂದು ಮಿತಿ ಇದೆ. ಈ ಪ್ರಕರಣದಲ್ಲಿ ಕಿರುಕುಳ ನೀಡುವ ಅಗತ್ಯವಿಲ್ಲ. ನ್ಯಾಷನಲ್ ಹೆರಾಲ್ಡ್ ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಅವರ ಆಸ್ತಿಯಲ್ಲ. ಪಕ್ಷದ ಅಧ್ಯಕ್ಷ ಸ್ಥಾನದಲ್ಲಿದ್ದ ಕಾರಣಕ್ಕೆ ಅವರು ಈ ಸಂಸ್ಥೆಯ ಷೇರುಗಳ ಪಾಲಕರಾಗಿದ್ದರು.
ನಾನು ಹಾಗೂ ಸಿಎಂ ಅವರೂ ಕೂಡ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರಾಗಿದ್ದೇವೆ. ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಅವರ ಹೆಸರಿನಲ್ಲಿ ಕನಿಷ್ಠ 1-2 ಷೇರುಗಳು ಇರುತ್ತವೆ. ನಮ್ಮ ಅಧಿಕಾರ ಮುಗಿದ ನಂತರ ಈ ಷೇರುಗಳು ವರ್ಗಾವಣೆಯಾಗುತ್ತದೆ.
ಅದೇ ರೀತಿ ನಮ್ಮ ನಾಯಕರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಕಾರಣ, ಜವಹಾರ್ ಲಾಲ್ ನೆಹರೂ ಅವರ ಕಾಲದಿಂದ ನಡೆದುಕೊಂಡು ಬಂದಿರುವ ಪ್ರತೀತಿಯಂತೆ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಜವಾಬ್ದಾರಿ ಹೊತ್ತಿರುತ್ತಾರೆ ಎಂದು ವಿವರಿಸಿದರು
