ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನಾಗುತ್ತೋ ಆಗಲಿ!": ಸಿಎಂ ಸಿದ್ದರಾಮಯ್ಯ ಅಚ್ಚರಿ ಮಾತು

Waves of Karnataka


 ವಿಧಾನಸೌಧದಲ್ಲಿ ಸಭೆ ಮುಗಿಸಿ ಹೊರಬರುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಅಡ್ಡ ಬಂದು ನಿಂತ ಬೇಳೂರು ಗೋಪಾಲಕೃಷ್ಣ, ಮೊದಲು ಹಾಸ್ಯದ ಲಹರಿಯಲ್ಲಿ ನಾಟಿ ಕೋಳಿ ಸಾಂಬಾರ್ ಹೇಗಿತ್ತು ಸಾರ್? ಎಂದು ಪ್ರಶ್ನಿಸಿದ್ದಾರೆ. ಆದರೆ ಸಿಎಂ ಅವರ ಉತ್ತರ ಸಂಪೂರ್ಣ ಗಂಭೀರವಾಗಿತ್ತು.

ರಾಜಕೀಯ ಶಾಶ್ವತ ಅಲ್ಲ ಗೋಪಾಲಕೃಷ್ಣ. ನಾನು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನ್ ಆಗುತ್ತೋ ಆಗಲಿ ಎಂದು ಅಚ್ಚರಿ ಮಾತುಗಳನ್ನು ಆಡಿದ್ದಾರೆ. ಈ ಒಂದು ಸಣ್ಣ ಸಂಭಾಷಣೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಸಚಿವ ಸ್ಥಾನಕ್ಕೆ ಆಕಾಂಕ್ಷಿಯಾಗಿರುವ ಹಾಸನ ಜಿಲ್ಲೆಯ ಹಳೇಬೀಡು ಶಾಸಕ ಬೇಳೂರು ಗೋಪಾಲಕೃಷ್ಣ ಸಿಎಂ ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿಯಾಗಿ ಮಾತನಾಡಿಸಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಆಡಿರುವ ಮಾತು ಬಹಳಷ್ಟು ಚರ್ಚೆಗೆ ಕಾರಣವಾಗಿದೆ