ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ನಾಯಕತ್ವ ಬದಲಾವಣೆ ಚರ್ಚೆಯ ನಡುವೆಯೇ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿದೆ ಸಿಎಂ-ಡಿಸಿಎಂ ಸ್ಥಾನ ಸಿಗಬೇಕೆಂದು ಅವರ ಬೆಂಬಲಿಗರು ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ.
ಈ ಕುರಿತು ಕೈ ಪಾಳಯದಲ್ಲಿ ಚರ್ಚೆಗಳು ಜೋರಾಗಿ ನಡೆಯುತ್ತಿದ್ದು, ಈ ಹಗ್ಗಜಗ್ಗಾಟದಲ್ಲಿ ಪರಮೇಶ್ವರ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸಿದ್ದರಾಮಯ್ಯ ಬಣದ ಬೆಂಬಲ ಹೊಂದಿರುವ ಪರಮೇಶ್ವರ್ ಅವರು, ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಮುಂದಾಗಿದ್ದು, ಡಿಸೆಂಬರ್ 26ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಗೂ ಮುನ್ನ ಅವರು ದೆಹಲಿಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
