ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಕುಮಾರ್ ಬಂಗಾರಪ್ಪ, ಶ್ರೀಮಂತ್ ಪಾಟೀಲ್, ಬಿ.ವಿ. ನಾಯಕ್, ಬಿ.ಪಿ. ಹರೀಶ್, ಮಾಜಿ ಸಂಸದ ಸಿದ್ದೇಶ್ವರ ಮತ್ತು ಜೆಡಿಎಸ್‌ನ ಎನ್.ಆರ್. ಸಂತೋಷ್ ಸೇರಿದಂತೆ ಹಲವು ರೆಬೆಲ್ ನಾಯಕರು ದೆಹಲಿಗೆ ತೆರಳಿದ್ದಾರೆ.
ಮಂಗಳವಾರ ದೆಹಲಿ ತಲುಪಿರುವ ಬಂಡಾಯ ನಾಯಕರ ಗುಂಪು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಸಮಯ ಕೇಳಿದ್ದು, ರಾಜ್ಯ ಬಿಜೆಪಿಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲು ಮುಂದಾಗಿದ್ದಾರೆ.
ಇಷ್ಟು ದಿನ ಸೈಲೆಂಟ್ ಆಗಿದ್ದ ರೆಬೆಲ್ಸ್ ತಂಡವು ರಾಜ್ಯ ನಾಯಕತ್ವದ ವಿರುದ್ಧ ತಮ್ಮ ಅಸಮಾಧಾನವನ್ನು ಹೈಕಮಾಂಡ್ ಮುಂದೆ ಮಂಡಿಸಲು ಮತ್ತೆ ಆಕ್ಟಿವ್ ಆಗಿದ್ದಾರೆ.
ಈ ನಡುವೆ ಬಂಡಾಯ ನಾಯಕರ ದೆಹಲಿ ಭೇಟಿಗೆ ಬಿಜೆಪಿ ಹಿರಿಯ ನಾಯಕರು ಆಶ್ಚರ್ಯ ವ್ಯಕ್ತಪಡಿಸಿದ್ದು, ಇದ್ದಕ್ಕಿದ್ದಂತೆ ಬಂಡಾಯಕ್ಕೆ ಕಾರಣ ಕುರಿತು ಪ್ರಶ್ನೆ ಮಾಡಿದೆ ಎಂದು ಮೂಲಗಳು ತಿಳಿಸಿವೆ
