ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಮುಗಿಸಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರು ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಕ್ಷೇತ್ರಕ್ಕೆ ಭೇಟಿ ನೀಡಿ ಡಿ ಕೆ ಶಿವಕುಮಾರ್ ವಿಶೇಷ ಅರ್ಚನೆ, ಆತ್ಮಲಿಂಗಕ್ಕೆ ಅಭಿಷೇಕ ಮಾಡಿಸಿದ್ದರು.
ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್ ನಿವಾಸಕ್ಕೆ ಹರಿದ್ವಾರದಿಂದ ಬಂದ ನಾಗ ಸಾಧುಗಳು ಆಶೀರ್ವಾದ ಮಾಡಿರುವುದು ಸಿಎಂ ಹುದ್ದೆ ಗದ್ದಲ ನಡುವೆ ತೀವ್ರ ಕುತೂಹಲ ಕೆರಳಿಸಿದೆ. ಕೆಲವು ಸಮಯ ಹಿಂದೆ ಕಾಶಿಯಿಂದ ಬಂದ ನಾಗ ಸಾಧುಗಳು ಡಿಕೆಶಿ ಸಿಎಂ ಆಗಲೆಂದು ಆಶೀರ್ವಾದ ಮಾಡಿದ್ದರು. ಇಂದು ಅವರ ನಿವಾಸಕ್ಕೆ 20ಕ್ಕೂ ಹೆಚ್ಚು ನಾಗ ಸಾಧುಗಳು ಬಂದು ಆಶೀರ್ವಾದ ಮಾಡಿದ್ದಾರೆ
ಅವರು ಬಂದು ಹೋದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ನಾಗಸಾಧುಗಳು ಮನೆಯ ಬಾಗಿಲಿಗೆ ಬಂದಿದ್ರು. ಬಂದಾಗ ಅವರನ್ನ ಹೋಗಿ ಎನ್ನಲು ಆಗುವುದಿಲ್ಲ ಅವರು ಬಂದು ಆಶೀರ್ವಾದ ಮಾಡಿದ್ರು. ಯಾರಾದ್ರೂ ನಿಮ್ಮ ಮನೆಗೆ ಬಂದ್ರೆ ನೀವೂ ಹಾಗೇ ಕಳಿಸ್ತೀರಾ? ಹಾಗೆ ಧಾರ್ಮಿಕತೆಯಲ್ಲಿ ಬಂದಿದ್ರು, ಬಂದವರನ್ನ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡೆ, ನಾವು ರಾಜಕೀಯದಲ್ಲಿರುವವರು, ರಾಜಕೀಯದಲ್ಲಿರುವವರಿಗೆ ಎಲ್ಲರೂ ಬೇಕಾಗುತ್ತದೆ ಎಂದರು.
.jpg)